
ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮುಂಬರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ, ಮಹೋತ್ಸವ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.
ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದರು.
ಈ ವೇಳೆ ಮಹಾಮಸ್ತಕಾಭಿಷೇಕ ಮಹೋತ್ಸವದ ಸಿದ್ಧತೆಗಳ ಕುರಿತು ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು,
ಮುನಿಯಾಲ್ ಉದಯಕುಮಾರ್ ಶೆಟ್ಟಿ , ಮಾಜಿ ಮೇಯರ್ ಭಾಸ್ಕರ್ ಮೊಯಿಲಿ , ಮಹೋತ್ಸವ ಸಮಿತಿಯ ಪದಾಧಿಕಾರಿಗಳಾದ ಪುಷ್ಪರಾಜ್ ಜೈನ್, ಸುನಿಲ್ ಕುಮಾರ್ ಬಜಗೋಳಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.