ಇನ್‌ಸ್ಟಾದಲ್ಲಿ 10 ಕೋಟಿ ಫಾಲೋವರ್ಸ್‌ ಹೊಂದಿದ ವಿಶ್ವದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪ್ರದಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ಫೋಟೋ ಹಾಗೂ ವಿಡಿಯೋ ಹಂಚಿಕೆ ತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್(10 ಕೋಟಿ) ಫಾಲೋವರ್‌ಗಳನ್ನು ಹೊಂದಿದ ವಿಶ್ವದ ಮೊದಲ ರಾಜಕೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2014ರಲ್ಲಿ ಇನ್‌ಸ್ಟಾಗ್ರಾಮ್‌ ಖಾತೆ ತೆರೆದಿದ್ದ ಮೋದಿ, ಕಳೆದ ಹತ್ತು ವರ್ಷಗಳಲ್ಲಿ ಈ ವೇದಿಕೆಯನ್ನು ಜನಸಾಮಾನ್ಯರೊಂದಿಗೆ ಸಂಪರ್ಕ ಸಾಧಿಸಲು ಸಮರ್ಥವಾಗಿ ಬಳಸಿಕೊಂಡಿದ್ದಾರೆ. ಅಧಿಕೃತ ಕಾರ್ಯಕ್ರಮಗಳು, ವಿದೇಶಿ ಪ್ರವಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ಕ್ಷಣಗಳ ಪೋಸ್ಟ್‌ಗಳ ಮೂಲಕ ಯುವಜನತೆಯನ್ನು ಸೆಳೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 43.2 ಮಿಲಿಯನ್ (4.32 ಕೋಟಿ) ಫಾಲೋವರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಅವರ ನಂತರ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ (1.50 ಕೋಟಿ), ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾಡ ಸಿಲ್ವಾ 14.4 ಮಿಲಿಯನ್ (1.44 ಕೋಟಿ), ಟರ್ಕಿ ಅಧ್ಯಕ್ಷ ಎರ್ಡೋಗನ್‌ 11.6 ಮಿಲಿಯನ್ (1.11 ಕೋಟಿ), ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲೆ 6.4 ಮಿಲಿಯನ್ (64 ಲಕ್ಷ) ಫಾಲೋವರ್‌ಗಳನ್ನು ಹೊಂದಿದ್ದಾರೆ.

ಇದಲ್ಲದೆ, ಭಾರತದೊಳಗೂ ಫಾಲೋವರ್‌ಗಳ ಸಂಖ್ಯೆಯ ಅಂತರವು ದಿಗ್ಭ್ರಮೆಗೊಳಿಸುವಂತಿದೆ. ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಇತರ ರಾಜಕೀಯ ನಾಯಕರಿಗಿಂತ ಬಹಳ ಮುಂದಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 16.1 ಮಿಲಿಯನ್ (1.61 ಕೋಟಿ) ಫಾಲೋವರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 12.6 ಮಿಲಿಯನ್ (1.26 ಕೋಟಿ) ಫಾಲೋವರ್‌ಗಳನ್ನು ಪಡೆದಿದ್ದಾರೆ.

error: Content is protected !!