ವಿಟ್ಲ: ಕೇರಳದಿಂದ ಪೆರುವಾಯಿ ಮಾರ್ಗವಾಗಿ ಯಾವುದೇ ಪರವಾನಿಗೆ ಇಲ್ಲದೆ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಆಕ್ರಮವಾಗಿ ಕರ್ನಾಟಕಕ್ಕೆ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಎರಡು ಲಾರಿಗಳನ್ನು ಪೊಲೀಸರು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದಾಗ ಅದರ ಚಾಲಕರಾದ ವಿಟ್ಲ ನಿವಾಸಿ ಸಾದಿಕ್ ಹಾಗೂ ಮುಹಮ್ಮದ್ ರವರು ಕೇರಳದ ಧರ್ಮತ್ತಡ್ಕದಿಂದ ವೇಣು ಎಂಬವರು ಕಲ್ಲುಗಳನ್ನು ತುಂಬಿಸಿ ಕಳುಹಿಸಿಕೊಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ದಾಖಲೆಗಳನ್ನು ಕೇಳಿದಾಗ ಅವರ ಬಳಿ ಯಾವುದೇ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಎರಡೂ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.