ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಸುಪ್ರೀಂಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದು, ಸಧ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಶಾಸಕ ವಿನಯ್ ಕುಲಕರ್ಣಿ ಜಾಮೀನು ಪಡೆಯುವ ಮೂಲಕ ನ್ಯಾಯ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದ್ದಾರೆ.
