
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ತೆಲಂಗಾಣ ಜಾಗೃತಿ ಅಧ್ಯಕ್ಷೆ ಕೆ. ಕವಿತಾ ಸೇರಿದಂತೆ 23 ಮಂದಿಯನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ದಿಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿ, ನ್ಯಾಯಾಲಯವು ಅಬಕಾರಿ ನೀತಿಯಲ್ಲಿ ಯಾವುದೇ ವ್ಯಾಪಕ ಪಿತೂರಿ ಅಥವಾ ಅಪರಾಧ ಉದ್ದೇಶ ಇರಲಿಲ್ಲ ಎಂದು ತೀರ್ಪು ನೀಡಿದೆ.


ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಿತೇಂದ್ರ ಸಿಂಗ್ ಅವರು, ಆರೋಪಿಗಳ ವಿರುದ್ಧ ಸಿಬಿಐ ತನಿಖೆಯನ್ನು ಮುಕ್ತಾಯಗೊಳಿಸುವ ಆದೇಶವನ್ನು ಹೊರಡಿಸಿದ್ದಾರೆ. 23ಆರೋಪಿಗಳ ವಿರುದ್ಧ ಪ್ರಾಥಮಿಕವಾಗಿ ಯಾವುದೇ ಆರೋಪವು ಸಾಬೀತಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.