ಅಪಘಾತಕ್ಕೀಡಾದ ಪಾದಚಾರಿಗೆ ಸಕಾಲದಲ್ಲಿ ನೆರವು; ಕಾಂಗ್ರೆಸ್ ಮುಖಂಡ ಪ್ರವೀಣ್ ಆಚಾರ್ಯ ತಂಡದ ಕಾರ್ಯಕ್ಕೆ ಮೆಚ್ಚುಗೆ

ಪುತ್ತೂರು: ಮರೀಲ್ ಕೂರ್ನಡ್ಕ ಮಸೀದಿ ಬಳಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರನ್ನು ರಕ್ಷಿಸಿ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಮತ್ತು ತಂಡದವರು ಮಾನವೀಯತೆ ಮೆರೆದಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಪ್ರವೀಣ್ ಆಚಾರ್ಯ ಅವರು ವೈಯಕ್ತಿಕ ಕೆಲಸದ ನಿಮಿತ್ತ ತುರ್ತಾಗಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿಯಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿದ ಅವರು, ತಕ್ಷಣವೇ ಕಾರ್ಯಪ್ರವೃತ್ತರಾದರು. ಗಾಯಾಳುವನ್ನು ತಮ್ಮದೇ ಕಾರಿನಲ್ಲಿ ಪುತ್ತೂರಿನ ಹಿತ ಆಸ್ಪತ್ರೆಗೆ ದಾಖಲಿಸಿದರು.

ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದರಿಂದ, ಪ್ರಾಥಮಿಕ ಚಿಕಿತ್ಸೆಯ ನಂತರ ಸಾರ್ವಜನಿಕರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲು ಪ್ರವೀಣ್ ಆಚಾರ್ಯ ಅವರು ಮುಂದಾಳತ್ವ ವಹಿಸಿದರು. ಈ ಮಾನವೀಯ ಕಾರ್ಯದಲ್ಲಿ ರೋಷನ್ ಬನ್ನೂರು ಹಾಗೂ ಮೋನು ಬಪ್ಪಳಿಗೆ ಅವರು ಕೂಡ ಸಾಥ್ ನೀಡಿದರು.

ತಮ್ಮ ತುರ್ತು ಕೆಲಸವನ್ನೂ ಬದಿಗಿಟ್ಟು ಅಪರಿಚಿತ ವ್ಯಕ್ತಿಯ ಪ್ರಾಣ ಉಳಿಸಲು ಶ್ರಮಿಸಿದ ಪ್ರವೀಣ್ ಆಚಾರ್ಯ ಮತ್ತು ಅವರ ತಂಡದ ಸಮಯಪ್ರಜ್ಞೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

error: Content is protected !!