ಬೈಕ್​​ಗೆ ಟ್ರಕ್ ಡಿಕ್ಕಿ: ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ರಾಯಚೂರು: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳಾದ ಮೊಹಮ್ಮದ್​​ ಅಲಿ(24), ನೂರ್ ಮೊಹಮ್ಮದ್(19) ಮತ್ತು ಫಯಾಜ್(26) ಮೃತ ದುರ್ದೈವಿ.

ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್​​ಗೆ ಹೈದರಾಬಾದ್​​​​ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!