ಹಾಸನ: ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಸಕಲೇಶಪುರ ಸಮೀಪದ ಗುಲಗಳಲೆ ಸಮೀಪ ಇಂದು(ಫೆ.28) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅತಿ ವೇಗದಿಂದ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆ ಸ್ಪಷ್ಟವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತರು ತಮಿಳುನಾಡು ಹಾಗೂ ಕೆಜಿಎಫ್ ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು ಆತನನ್ನು ತಕ್ಷಣ ಹಾಸನ ಜಿಲ್ಲಾಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.