ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು!

ಉಡುಪಿ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

error: Content is protected !!