ಪುತ್ತೂರು: ದೇವಸ್ಥಾನದ ಜಾತ್ರೋತ್ಸವದ ವೇಳೆ ಕುಣಿತ ಭಜನೆ ಮಾಡುತ್ತಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಪುತ್ತೂರಿನ ಈಶ್ವರಮಂಗಲ ಸಮೀಪ ನಡೆದಿದೆ.

ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಮೃತ ಮಹಿಳೆ.
ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಕುಣಿತ ಭಜನೆ ಕಾರ್ಯಕ್ರಮದಲ್ಲಿ ರತ್ನಾವತಿ ಬಾಳಪ್ಪ ಪೂಜಾರಿ ಭಾಗವಹಿಸಿದ್ದರು, ಈ ಸಂದರ್ಭ ಅವರು ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಅವರನ್ನು ತಕ್ಷಣ ಪುತ್ತೂರು ಆಸ್ಪತ್ರೆ ಕರೆದೊಯ್ದರೂ, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.