ದಾಂಡೇಲಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ದಾಂಡೇಲಿ ತಾಲೂಕಿನ ಹರೇಗಾಳಿ ಸಮೀಪ ಇಂದು(ಮಾ.2) ನಡೆದಿದೆ.

ಕೆಎ.32, ಎಂ ಎ 3087 ನೋಂದಣಿ ಸಂಖ್ಯೆಯ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹರೇಗಾಳಿಯ ಹತ್ತಿರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ಕಲ್ಬುರ್ಗಿ ಕಡೆಯವರಾಗಿದ್ದು, ಪ್ರವಾಸಕ್ಕೆಂದು ಬಂದಿದ್ದರು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ.

ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.