ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಅಫ್ಘಾನಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳನ್ನು ಎದುರಿಸಲಿದ್ದಾರೆ. ಈ ಎರಡು ಸರಣಿಗಳಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಭಾರತ ತಂಡದ ಮುಂದಿನ 15 ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್ ಮಾಡಲಾಗಿದ್ದು, 2027ರ ಏಕದಿನ ವಿಶ್ವಕಪ್ಗೂ ಮುನ್ನ ನಡೆಯಲಿರುವ ಈ ಮ್ಯಾಚ್ಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.

ಈ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಏಕದಿನ ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಈ ವರ್ಷ ಹಿಟ್ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ಕಣಕ್ಕಿಳಿಯಲಿರುವ ಹದಿನೈದು ಮ್ಯಾಚ್ಗಳ ವೇಳಾಪಟ್ಟಿ ಈ ಕೆಳಗಿನಂತಿದೆ….

ಭಾರತ vs ಅಫ್ಘಾನಿಸ್ತಾನ್:
ಜೂನ್ ತಿಂಗಳಲ್ಲಿ ಟೀಮ್ ಇಂಡಿಯಾ ವಿರುದ್ಧ 4 ಪಂದ್ಯಗಳ ಸರಣಿ ಆಡಲು ಅಫ್ಘಾನಿಸ್ತಾನ್ ತಂಡ ಭಾರತಕ್ಕೆ ಆಗಮಿಸಲಿದೆ. ಈ ಸರಣಿಯಲ್ಲಿ ಒಂದು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಏಕದಿನ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ…
1ನೇ ಏಕದಿನ: ಜೂನ್ 14, 2026 – ಧರ್ಮಶಾಲಾ (ಮಧ್ಯಾಹ್ನ 1:30).
2ನೇ ಏಕದಿನ: ಜೂನ್ 17, 2026 – ಲಕ್ನೋ (ಮಧ್ಯಾಹ್ನ 1:30).
3ನೇ ಏಕದಿನ: ಜೂನ್ 20, 2026 – ಚೆನ್ನೈ (ಮಧ್ಯಾಹ್ನ 1:30).
ಭಾರತ vs ಇಂಗ್ಲೆಂಡ್:
ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತ ಮೂರು ಏಕದಿನ ಪಂದ್ಯಗಳನ್ನಾಡಲಿದ್ದಾರೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…
1ನೇ ಏಕದಿನ: ಜುಲೈ 14, 2026 – ಬರ್ಮಿಂಗ್‌ಹ್ಯಾಮ್.
2ನೇ ಏಕದಿನ: ಜುಲೈ 16, 2026 – ಕಾರ್ಡಿಫ್.
3ನೇ ಏಕದಿನ: ಜುಲೈ 19, 2026 – ಲಂಡನ್ (ಲಾರ್ಡ್ಸ್).
ಭಾರತ vs ವೆಸ್ಟ್ ಇಂಡೀಸ್:
ಭಾರತ ತಂಡವು ಸೆಪ್ಟೆಂಬರ್ ಮತ್ತು ಅಕ್ಟೋಬರ್ 2026 ರ ಅವಧಿಯಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಆತಿಥ್ಯ ವಹಿಸಲಿದೆ. ಈ ಸರಣಿಯಲ್ಲಿ 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಅಧಿಕೃತ ದಿನಾಂಕಗಳು ಮತ್ತು ಕ್ರೀಡಾಂಗಣಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.
ಭಾರತ vs ನ್ಯೂಝಿಲೆಂಡ್:
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಈ ಸರಣಿಯಲ್ಲೂ ಭಾರತ ತಂಡ 3 ಏಕದಿನ ಪಂದ್ಯಗಳನ್ನಾಡಲಿದೆ. ಈ ಸರಣಿಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್ ಪ್ರಕಟಿಸಲಿದೆ.
ಭಾರತ vs ಶ್ರೀಲಂಕಾ:
ಈ ವರ್ಷಾಂತ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಡಿಸೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು ಮೂರು ಏಕದಿನ ಪಂದ್ಯಗಳನ್ನಾಡಲಿದೆ. ಈ ಸರಣಿಯ ಸ್ಥಳಗಳನ್ನು ಸಹ ಶೀಘ್ರದಲ್ಲೇ ನಿಗದಿ ಮಾಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.