ಕಲಬುರಗಿ: ಜಿಲ್ಲಾ ನ್ಯಾಯಾಲಯದ ಜಿಲ್ಲಾಧಿಕಾರಿಗಳ (ಡಿಸಿ) ಇ-ಮೇಲ್ ಐಡಿಗೆ ಬಾಂಬ್ ಬೆದರಿಕೆಯನ್ನೊಡ್ಡಿದ ಸಂದೇಶ ರವಾನಿಸಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಲಾಗಿದೆ.

ವಿಚಾರ ತಿಳಿದ ಕೂಡಲೇ ಡಿಸಿ ಅವರು ಈ ವಿಷಯವನ್ನು ನ್ಯಾಯಾಲಯದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದ ಗಂಭೀರತೆಯನ್ನು ಮನಗಂಡು, ತಕ್ಷಣವೇ ಕೋರ್ಟ್ ಹಾಲ್‌ನಿಂದ ಎಲ್ಲರನ್ನೂ ಹೊರಗೆ ಕಳುಹಿಸಿ ಸಂಪೂರ್ಣ ಆವರಣವನ್ನು ತೆರವುಗೊಳಿಸಲಾಯಿತು.

ನಂತರ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಿಬ್ಬಂದಿ ನ್ಯಾಯಾಲಯದ ಆವರಣದಾದ್ಯಂತ ಕೂಲಂಕಷ ತಪಾಸಣೆ ನಡೆಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಯಿತು.