ದೇಶದಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು!

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ, ಒಂದೇ ದಿನ ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ವಿಮಾನ ನಿಲ್ದಾಣಗಳಲ್ಲಿ ಒಟ್ಟು 250ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ತೀವ್ರತೆಯನ್ನು ಪಡಎದುಕೊಂಡಿರುವುದರಿಂದ ಸತತ ನಾಲ್ಕನೇ ದಿನವೂ ವಿಮಾನಯಾನ ಸೇವೆಯಲ್ಲಿ ಏರುಪೇರಾಗಿದೆ. ಸುರಕ್ಷತೆಯ ದೃಷ್ಟಿಯಿಂದ ವಿಮಾನಯಾನ ಸಂಸ್ಥೆಗಳು ಅಂತಾರಾಷ್ಟ್ರೀಯ ಮತ್ತು ಪಶ್ಚಿಮ ದೇಶಗಳಿಗೆ ತೆರಳುವ ವಿಮಾನಗಳನ್ನು ರದ್ದುಗೊಳಿಸಿವೆ.

ಮುಂಬೈ-107, ದೆಹಲಿ- 80, ಬೆಂಗಳೂರು(ಕೆಐಎ)-42 ಮತ್ತು ಚೆನ್ನೈ-30 ವಿಮಾನಗಳ ಸಂಚಾರ ರದ್ದುಗೊಳಿಸಲಾಗಿದೆ.

ಫೆಬ್ರವರಿ 28 ರಂದು ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದಾಗಿನಿಂದ ಇಲ್ಲಿಯವರೆಗೆ ಭಾರತೀಯ ವಿಮಾನಯಾನ ಸಂಸ್ಥೆಗಳು ಒಟ್ಟು 1,117 ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿವೆ. ಪಶ್ಚಿಮ ದೇಶಗಳಿಗೆ ತೆರಳುವ ವಿಮಾನಗಳ ಮಾರ್ಗ ಬದಲಾವಣೆ ಅಥವಾ ವಿಳಂಬದ ಬಗ್ಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು (DIAL) ಈಗಾಗಲೇ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ.

error: Content is protected !!