ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ; ಐವರು ಸಾ*ವು

ಚಿತ್ತೂರು: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ಇಂದು(ಮಾ.4) ಬೆಳಗ್ಗೆ 8.45 ರ ಸುಮಾರಿಗೆ ನಡೆದಿದೆ.

ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ ತಕ್ಷಣ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

error: Content is protected !!