ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ. ಅವರ ಅಧ್ಯಕ್ಷತೆಯಲ್ಲಿ ನಿನ್ನೆಮಂಗಳೂರು ಮಹಾನಗರ ಪಾಲಿಕೆ ಕಟ್ಟಡದ ಶಾಸಕರ ಕಚೇರಿಯಲ್ಲಿ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.



ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಮುಖ್ಯವಾಗಿ ಮಳೆಗಾಲಕ್ಕೆ ಮುನ್ನ ನಗರದ ಪ್ರಮುಖ ರಾಜಕಾಲುವೆ ಹಾಗೂ ಚರಂಡಿಗಳ ಹೂಳೆತ್ತುವ ಕಾರ್ಯವನ್ನು ಚುರುಕುಗೊಳಿಸಲು ಮತ್ತು ಬಾಕಿ ಇರುವ ರಸ್ತೆ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಬೇಸಿಗೆ ಕಾಲ ಆರಂಭವಾಗುತ್ತಿರುವುದರಿಂದ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಲು ನಿರ್ದೇಶನವನ್ನು ಶಾಸಕ ಭರತ್ ಶೆಟ್ಟಿ ನೀಡಿದರು.
ಸಭೆಯಲ್ಲಿ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
