ಮ್ಯಾಪ್ಸ್ ಕಾಲೇಜಿನಲ್ಲಿ 117ನೇ ʻಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಸಂಪನ್ನ

ಮಂಗಳೂರು: ನಗರದ ಅಮೃತ ಪ್ರಕಾಶ ಪತ್ರಿಕೆ ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಮಾರ್ಚ್ 5ರಂದು ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಾಹಿತ್ಯದ ಮೇಲಿನ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ʻಸಾಹಿತ್ಯ ಅಭಿರುಚಿ’ ಸರಣಿ ಕಾರ್ಯಕ್ರಮದ ಮಹತ್ವವನ್ನು ಅವರು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಚಂದ್ರಶೇಖರ್ ಭಾಗವಹಿಸಿ ವಿಷಯ ಮಂಡಿಸಿದರು.

ವೇದಿಕೆಯಲ್ಲಿ ವಿಜಯ ಕರ್ನಾಟಕ ದೈನಿಕ ಪತ್ರಿಕೆಯ ಹಿರಿಯ ವರದಿಗಾರ ವಿಜಯ ಕೋಟ್ಯಾನ್, ಹಿರಿಯ ಸಾಹಿತಿ ಹಾಗೂ ಕಾದಂಬರಿಗಾರ ಡಾ. ಪ್ರಭಾಕರ ನೀರುಮಾರ್ಗ ಮತ್ತು ತುಳು ಪರಿಷತ್ ಮಂಗಳೂರು ಅಧ್ಯಕ್ಷರಾದ ಶುಭೋದಯ ಆಳ್ವ ಅತಿಥಿಗಳಾಗಿ ಉಪಸ್ಥಿತರಿದ್ದರು.

ಲೇಖಕಿ ಸುಧಾ ನಾಗೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.ಮನ್ವಿತ್ ಶೆಟ್ಟಿ ವಂದನಾರ್ಪಣೆ ಮಾಡಿದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

error: Content is protected !!