ಬಂಟ್ವಾಳ: ಕರ್ನಾಟಕ ಸರ್ಕಾರ ಮಂಡಿಸಿದ ಇಂದಿನ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರಿಗೆ ನೀಡಿದ ಯೋಜನೆಗಳು ಸ್ವಾಗತಾರ್ಹವಾಗಿವೆ ಎಂದು ರಾಜ್ಯ ಬಜೆಟನ್ನು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಶ್ಲಾಘಿಸಿದ್ದಾರೆ.

ಜೊತೆಗೆ ಕರಾವಳಿ ಪ್ರದೇಶದ ಪ್ರವಾಸೋದ್ಯಮ, ಮೀನುಗಾರಿಕೆ, ಪೊಲೀಸ್ ಠಾಣೆಗಳ ಬಲವರ್ಧನೆ, ಕೃಷಿ, ಅರಣ್ಯ, ಆರೋಗ್ಯ, ಮುಜರಾಯಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ,ವಸತಿ ,ಶಿಕ್ಷಣ ಕ್ಷೇತ್ರಕ್ಕೆ ಸೇರಿದಂತೆ ಎಲ್ಲಾ ವರ್ಗದ ಸಮುದಾಯದ ಕಲ್ಯಾಣಕ್ಕಾಗಿ ವಿಶೇಷ ಆದ್ಯತೆ ಸಂತಸ ಸಂಗತಿಯಾಗಿದೆ. ರಾಜ್ಯದ ಸಮಗ್ರ ಹಾಗು ಕರಾವಳಿ ಅಭಿವೃದ್ಧಿಗೆ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ ಎಂದು ಬಣ್ಣಿಸಿದ್ದಾರೆ.
