ಸಮಾಜ ಸೇವಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರು: ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಂಟಿ ಆಶ್ರಯದಲ್ಲಿ ನಡೆಯುವ 2026 ನೇ ಸಾಲಿನ ಪ್ರತಿಷ್ಠಿತ *ಸಮಾಜ ಸೇವಾ ರತ್ನ *ಪ್ರಶಸ್ತಿಗೆ ಸಾಹಿತ್ಯ, ಪತ್ರಿಕೋದ್ಯಮ ,ಸಮಾಜ ಸೇವೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಮಾರ್ಚ್11ರಂದು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ತುಮಕೂರಿನ ಶ್ರೀ ವಾಲ್ಮೀಕಿ ಆಶ್ರಮದ ಶ್ರೀ ಶ್ರೀ ಸಂಜಯ ಕುಮಾರ ಸ್ವಾಮೀಜಿ ಆಶೀರ್ವಚನ ನೀಡುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರಕಾರ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಸರಕಾರ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡುವರು. ವಿಜಯನಗರ ಕ್ಷೇತ್ರದ ಶಾಸಕರಾದ ಎಂ ಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕ ಪ್ರಿಯಕೃಷ್ಣ ,ಸಮಾಜ ಕಲ್ಯಾಣ ಇಲಾಖೆ ನಿವೃತ್ತ ನಿರ್ದೇಶಕ ಕೆ. ಎಸ್. ಮೃತ್ಯುಂಜಯ ,ಗಾಯಕಿ ಸಂಗೀತ ನಿರ್ದೇಶಕಿ ಡಾ. ಗೀತಾ ಕೈವಾರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಿರ್ದೇಶಕ ಎ .ಎಸ್. ಕಾಂತರಾಜು, ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಬೆಂಗಳೂರು ನಿರ್ದೇಶಕ ಬಸವರಾಜು, ಕಾವೇರಿ ನೀರಾವರಿ ನಿಗಮ ಬೆಂಗಳೂರು ವ್ಯವಸ್ಥಾಪಕ ನಿರ್ದೇಶಕ ಮಹೇಶ, ಕರ್ನಾಟಕ ಕೊಲ್ಲಗೇರಿ ಅಭಿವೃದ್ಧಿ ಮಂಡಳಿ ಬೆಂಗಳೂರು ಆಯುಕ್ತರಾದ ರಾಘವೇಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ನಿರ್ದೇಶಕರಾದ ಯೋಗೀಶ್, ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆ ರಾಜ್ಯಾಧ್ಯಕ್ಷರಾದ ಡಾ. ಕೆಂಚನೂರು ಶಂಕರ ,ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಮಾಜಿ ಅಧ್ಯಕ್ಷರಾದ ಎಂ. ವಿ. ಪೊನ್ನಪ್ಪ ಮೊದಲಾದ ಗಣ್ಯರು ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷರಾದ ಎಂ .ರಾಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಡಾ. ಮಾಲತಿ ಶೆಟ್ಟಿ ಮಾಣೂರು ಕಳೆದ 21 ವರ್ಷಗಳಿಂದ ಸಾಹಿತ್ಯ ,ಪತ್ರಿಕೋದ್ಯಮ ,ಸಮಾಜ ಸೇವೆ, ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಳೆದ 13 ವರುಷಗಳಿಂದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ. 9 ಕೃತಿಗಳನ್ನು ಪ್ರಕಟಿಸಿದ್ದಾರೆ .ಇತರ ಹಿರಿಯ ಕಿರಿಯ ಲೇಖಕರ ಸರಣಿ ಕೃತಿ 49 ಕೃತಿಗಳನ್ನು ಪತ್ರಿಕೆಯ ವತಿಯಿಂದ ಬಿಡುಗಡೆಗೊಳಿಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಅಭಿರುಚಿ ಮೂಡುವ ಸಲುವಾಗಿ ಈಗಾಗಲೇ 117 ಶಾಲಾ-ಕಾಲೇಜುಗಳಲ್ಲಿ ಉಚಿತ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾಡಿ ದಾಖಲೆ ನಿರ್ಮಿಸಿದ್ದಾರೆ.

ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಹಿರಿಯ ಯಕ್ಷಗಾನ ಕಲಾವಿದ ದಿವಂಗತ ಕಿಟ್ಟಣ್ಣ ಶೆಟ್ಟಿ ಮಾಣೂರು ಹಾಗೂ ರೇವತಿ ಶೆಟ್ಟಿ ಮಾಣೂರು ಅವರ ಸುಪುತ್ರಿಯಾಗಿದ್ದು, ಮಂಗಳೂರಿನ ಅತಾವರ ವೈದ್ಯನಾಥ ನಗರದಲ್ಲಿ ಪತಿ ಸತ್ಯಪ್ರಕಾಶ ಶೆಟ್ಟಿ ಜೊತೆ ಸಾಹಿತ್ಯ ನಂದನದಲ್ಲಿ ವಾಸವಾಗಿದ್ದಾರೆ.

error: Content is protected !!