ಕಿವೀಸ್ ಮಣಿಸಿದ ಭಾರತ ಟಿ20 ಚಾಂಪಿಯನ್!

ಅಹಮ್ಮದಾಬಾದ್: ಟಿ20 ವಿಶ್ವಕಪ್ ಮಾದರಿಯಲ್ಲಿ ಭಾರತ ಸತತ 2ನೇ ಬಾರಿಗೆ ಚಾಂಪಿಯನ್ ಆಗಿದೆ. ನ್ಯೂಜಿಲೆಂಡ್ ವಿರುದ್ದ ನಡೆದ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ಭಾರತ 256 ರನ್ ಟಾರ್ಗೆಟ್ ನೀಡಿತ್ತು. ಬಳಿಕ ನ್ಯೂಜಿಲೆಂಡ್ ತಂಡವನ್ನು 159 ರನ್‌ಗೆ ಕಟ್ಟಿಹಾಕಿ 96 ರನ್ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಟ್ರೋಫಿ ಗೆದ್ದುಕೊಂಡಿದೆ. ವಿಶೇಷ ಅಂದರೆ ಈ ಟ್ರೋಫಿಯೊಂದಿಗೆ ಟೀಂ ಇಂಡಿಯಾ ಹಲವು ದಾಖಲೆ ಬರೆದಿದೆ. ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಆತಿಥ್ಯವಹಿಸಿದ ದೇಶವೊಂದು ಟ್ರೋಫಿ ಗೆದ್ದುಕೊಂಡ ಸಾಧನೆ ಮಾಡಿದೆ.


ಭಾರತ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಲವು ದಾಖಲೆ ಬರೆದಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೂರು ಟ್ರೋಫಿ ಗೆದ್ದುಕೊಂಡು ಗರಿಷ್ಠ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿದೆ. ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಲಾ 2 ಬಾರಿ ಟ್ರೋಫಿ ಗೆದ್ದುಕೊಂಡಿದೆ. ಇತ್ತ ಹಾಲಿ ಚಾಂಪಿಯನ್ ತಂಡ ಮತ್ತೆ ಟ್ರೋಫಿ ಗೆದ್ದುಕೊಂಡಿದ್ದು ಇದೇ ಮೊದಲು. ಇದೇ ಮೊದಲ ಬಾರಿಗೆ ಸತತ 2ಬಾರಿ ಟ್ರೋಫಿ ಗೆದ್ದ ಸಾಧನೆಯನ್ನು ಟೀಂ ಇಂಡಿಯಾ ಮಾಡಿದೆ. ಇನ್ನು ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿ ಆಯೋಜಿಸಿದ ದೇಶ ಟ್ರೋಫಿ ಗೆದ್ದಿದೆ.
ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ
ನ್ಯೂಜಿಲೆಂಡ್ ಗೆಲುವಿಗೆ 256 ರನ್ ಬೃಹತ್ ಟಾರ್ಗೆಟ್ ನೀಡಲಾಗಿತ್ತು.

error: Content is protected !!