ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ 96 ರನ್‌ಗಳ ಜಯ ಗಳಿಸಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.



ಈ ಗೆಲುವಿನ ಮೂಲಕ ಭಾರತ ಕ್ರಿಕೆಟ್ ತಂಡ ಹಲವು ವಿಶ್ವ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದ್ದ ಭಾರತ ಕ್ರಿಕೆಟ್ ತಂಡ ತನ್ನ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಬಾರಿ ವಿಶ್ವಕಪ್ ನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಭಾರತ ಕ್ರಿಕೆಟ್ ತಂಡ ಪಾತ್ರವಾಗಿದೆ.

2007 ರಲ್ಲಿ ಮೊದಲ ಬಾರಿಗೆ ಎಂಎಸ್ ಧೋನಿ ನೇತೃತ್ವದಲ್ಲಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನವನ್ನು ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಪಡೆದಿತ್ತು. ಆ ಬಳಿಕ 2024 ರಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿ 2ನೇ ಬಾರಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಈಗ ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿ 3ನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತ ಟಿ20 ಪುರುಷರ ವಿಭಾಗದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಟ್ರೋಫಿ ಗೆದ್ದ ತಂಡವಾಗಿದೆ
