ಬೇಸಿಗೆ ಕಾಲದ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಭರತ್ ಶೆಟ್ಟಿ ಸರಣಿ ಸಭೆ

 

ಮಂಗಳೂರು : ಮುಂಬರುವ ಬೇಸಿಗೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಮಂಗಳೂರು ಮಹಾ ನಗರ ಪಾಲಿಕೆಗೆ ಒಳಪಟ್ಟ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರ ಹಾಗೂ ಮುಂಜಾಗ್ರತ ಕ್ರಮಗಳ ಕುರಿತು ಮಾನ್ಯ ಶಾಸಕರು ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ವಿವಿಧ ಮಟ್ಟದ ಅಧಿಕಾರಿಗಳ ಹಾಗೂ ನಿಕಟಪೂರ್ವ ಪಾಲಿಕೆ ಸದಸ್ಯರ ಉಪಸ್ಥಿತಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಮಹತ್ವದ ಸರಣಿಗಳು ಸಭೆ ನಡೆಯಿತು.

ಮುಂಬರುವ ಬೇಸಿಗೆ ಸಮಯದಲ್ಲಿ, ಜನಸಾಮಾನ್ಯರಿಗೆ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಾಯವಾಗಬಾರದು, ಅದಕ್ಕಾಗಿ ಸೂಕ್ತವಾದ ಮುಂಜಾಗ್ರತ ಕ್ರಮವನ್ನು ವಹಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

error: Content is protected !!