ಕಂಟೈನರ್ ಲಾರಿಗೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

ಮಡಿಕೇರಿ: ಕಂಟೈನರ್ ಲಾರಿ ಮತ್ತು ಕಾರಿನ ನಡುವೆ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಮೀಪದ ತಿರುವಿನಲ್ಲಿ ಸೋಮವಾರ(ಮಾ.09) ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ತೀವ್ರ ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿ ಚಾಮುಂಡೇಶ್ವರಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಮಡಿಕೇರಿಯಿಂದ ಸುಳ್ಯದತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಲಾರಿಯ ಹಿಂಬದಿಯ ಚಕ್ರಕ್ಕೆ ಅಪ್ಪಳಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಬರೆಗೆ ಡಿಕ್ಕಿಯಾಗಿ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಾಳುಗಳನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!