ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಯಶಸ್ವಿಯಾಗಿ ಆರು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.


ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಡಿಕೆಶಿ ಅವರನ್ನು ಭೇಟಿಯಾದ ಮಂಜುನಾಥ ಭಂಡಾರಿಯವರು, ಪಕ್ಷದ ಸಂಘಟನೆಯಲ್ಲಿ ಅವರ ದಕ್ಷ ನಾಯಕತ್ವ ಹಾಗೂ ಕಳೆದ ಆರು ವರ್ಷಗಳ ಸಾಧನೆಯನ್ನು ಶ್ಲಾಘಿಸಿ ಮುಂದಿನ ದಿನಗಳಿಗೂ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಸೇರಿದಂತೆ ಹಲವಾರು ಪ್ರಮುಖ ಶಾಸಕರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದು, ಉಪಮುಖ್ಯಮಂತ್ರಿಗಳಿಗೆ ಶುಭಾಶಯಗಳನ್ನು ಕೋರಿದರು. ಪಕ್ಷದ ಸಂಘಟನೆಯಲ್ಲಿ ಡಿಕೆಶಿಯವರ ಪಯಣದ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು.
