ಪ್ರೀತ್ಸು ಅಂತ ಸಹಪಾಠಿಯ ಕಿರುಕುಳ; ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಆತ್ಮ*ಹತ್ಯೆ

ಬೀದರ್: ಸಹಪಾಠಿಯ ಕಿರುಕುಳ ತಾಳಲಾರದೆ 16 ವರ್ಷದ ಶಾಲಾ ಬಾಲಕಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.

ಮದಿಯಾ ನಶೀರ್ ಪಾಷಾ (16) ಮೃತ ಬಾಲಕಿ.

ಮದಿಯಾ ಶಾಲಾ ಕಟ್ಟಡದ ಮೇಲಿಂದ ಜಿಗಿದು ಪ್ರಾಣ ಬಿಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಭೆಮಳಖೇಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮದಿಯಾ ಸಾವಿನ ಕುರಿತು ಆಕೆಯ ಚಿಕ್ಕಪ್ಪ ಎಂ.ಡಿ. ಯೂಸುಫ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,“ಸಹಪಾಠಿಯೊಬ್ಬ ಮದಿಯಾಗೆ ಪ್ರೀತಿಸುವಂತೆ ನಿರಂತರವಾಗಿ ಪೀಡಿಸುತ್ತಿದ್ದ. ಆತನ ಕಿರುಕುಳದಿಂದ ಬೇಸತ್ತು ನನ್ನ ಮಗಳು ಈ ನಿರ್ಧಾರ ಕೈಗೊಂಡಿದ್ದಾಳೆ” ಎಂದು ಆರೋಪಿಸಿದ್ದಾರೆ.

ಕಿರುಕುಳದ ಆರೋಪಕ್ಕೆ ಪುಷ್ಟಿ ನೀಡುವಂತೆ, ಶಾಲೆಯ ಆವರಣದಲ್ಲಿ ಸಹಪಾಠಿ ವಿದ್ಯಾರ್ಥಿಯು ಬಾಲಕಿಗೆ ಚುಡಾಯಿಸುತ್ತಿದ್ದ ದೃಶ್ಯಗಳು ಅಲ್ಲಿನ ಸಿಸಿಟಿವಿ(CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

error: Content is protected !!