ಗ್ಯಾಸ್ ಸರಬರಾಜು ವಾಹನದಿಂದ ಗ್ಯಾಸ್ ಸಿಲಿಂಡರ್‌ಗಳನ್ನು ಕಳವು; ಇಬ್ಬರ ಬಂಧನ, 8 ಸಿಲಿಂಡರ್ ವಶಕ್ಕೆ

ರಾಮನಗರ: ಮನೆಮುಂದೆ ನಿಲ್ಲಿಸಿದ್ದ ಗ್ಯಾಸ್ ಸರಬರಾಜು ವಾಹನದಿಂದ ಗ್ಯಾಸ್ ಸಿಲಿಂಡರ್‌ಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿರುವ ಘಟನೆ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಮಹೇಶ್ ನಾಯಕ್ (19) ಮತ್ತು ಗೋವಿಂದರಾಜು (20) ಬಂಧಿತ ಆರೋಪಿ.

ಇವರು ಬನ್ನಿಕುಪ್ಪೆ ಗ್ರಾಮದಲ್ಲಿ ಮನೆಮುಂದೆ ನಿಲ್ಲಿಸಿದ್ದ ಗ್ಯಾಸ್ ಸರಬರಾಜು ವಾಹನದಿಂದ ಒಟ್ಟು 8 ಗ್ಯಾಸ್ ಸಿಲಿಂಡರ್‌ಗಳನ್ನು ಕಳವು ಮಾಡಿ ಪರಾರಿಯಾಗಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವಾಗಿದ್ದ 8 ಗ್ಯಾಸ್ ಸಿಲಿಂಡರ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

error: Content is protected !!