ಪಾರ್ಟಿಗೆ ಹೋದ ಯುವಕನ ಕತ್ತು ಸೀಳಿ ಬರ್ಬರ ಹತ್ಯೆ!!

ಚಾಮರಾಜನಗರ: ಗೆಳೆಯನ ಜೊತೆ ಬೈಕ್​​ ಏರಿ ಪಾರ್ಟಿಗೆ ಹೋಗಿದ್ದ ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದಿದೆ.

ಗುಂಡ್ಲುಪೇಟೆಯ ಮೂಖಹಳ್ಳಿ ಗ್ರಾಮದ ನಿವಾಸಿ ನಂಜುಂಡಸ್ವಾಮಿ (23) ಮೃತ ವ್ಯಕ್ತಿ.

ನಂಜುಂಡಸ್ವಾಮಿ ಬೆಂಗಳೂರು, ನಂಜನಗೂಡು ಹೀಗೆ ಹಲವೆಡೆ ಸಣ್ಣಪುಟ್ಟ ಕೂಲಿ, ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿ ಮನೆಗೆ ಬಂದಿದ್ದ ನಂಜುಂಡಸ್ವಾಮಿಯನ್ನು ಬಲವಂತದಿಂದ ಪಾರ್ಟಿ ಮಾಡೋಣ ಬಾ ಎಂದು ಕರೆದೊಯ್ದಿದ್ದ ಅಜಯ್ ಎಂಬಾತ ಸದ್ಯ ತಲೆ ಮರೆಸಿಕೊಂಡಿದ್ದಾನೆ. ಗಾಂಜಾ ಮತ್ತು ಅಥವಾ ಮದ್ಯದ ನಶೆಯಲ್ಲಿ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸದ್ಯ, ನಂಜುಂಡಸ್ವಾಮಿ ಸಹೋದರ ರಾಜು ನೀಡಿರುವ ದೂರಿನ ಅನ್ವಯ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಜಯ್​​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಯುವಕನ ಶವವನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ.

error: Content is protected !!