ಗೃಹಬಳಕೆ ಅನಿಲಕ್ಕೆ ಕೊರತೆಯಿಲ್ಲ; ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದ ಜಿಲ್ಲಾಧಿಕಾರಿ

ಬೆಂಗಳೂರು: ಗೃಹ ಬಳಕೆ ಅಡುಗೆ ಅನಿಲವು ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಅನಿಲದ ಕೊರತೆ ಇಲ್ಲವಾದ್ದರಿಂದ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಗೃಹಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದುಕೊರತೆಗಳು ಇದ್ದಲ್ಲಿ ಸಹಾಯವಾಣಿ: 9611404384 ಮೂಲಕ ಸಂಪರ್ಕಿಸಬಹುದು ಎಂದು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿ ದಾ ಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

 

ಬೆಂಗಳೂರಿನ ಹೋಟೆಲ್‌ಗ‌ಳು ಗ್ಯಾಸ್‌ ಕೊರತೆ ಅನುಭವಿಸುತ್ತಿದ್ದಾರೆ. ಇತ್ತ ಗೃಹ ಬಳಕೆ ಎಲ್‌ಪಿಜಿ ಕೊರತೆ ಉಂಟಾಗಬಹುದೆಂದು ಜನರು ಹೆಚ್ಚುವರಿ ಸಿಲಿಂಡರ್‌ ದಾಸ್ತಾನಿಗೆ ಮುಗಿಬಿದ್ದಿದ್ದರು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಈ ಪ್ರಕಟಣೆ ಹೊರಡಿಸಿದ್ದಾರೆ.

error: Content is protected !!