ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಹೆತ್ತ ತಾಯಿ!

ಬೆಂಗಳೂರು: ಹಣದ ಆಸೆಗಾಗಿ ಹೆತ್ತ ಮಗಳನ್ನೇ ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆ ದಂಧೆಗೆ ದೂಡಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಚಂದ್ರಾ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

15 ವರ್ಷದ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಹಾಗೂ ಆಕೆಯ ಮಲತಂದೆ ಹಾಗೂ ಮತ್ತೋರ್ವ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ಮುಗಿದ ಬಳಿಕ ಈ ಬಗ್ಗೆ ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ತಾಯಿ ಹಾಗೂ ಮಲತಂದೆ ಕಾರಿನಲ್ಲಿ ಪ್ರತಿದಿನ ಬಾಲಕಿಯನ್ನು ಆರೋಪಿ ಮಹಿಳೆಯೊಬ್ಬರ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಇದ್ದು ಗ್ರಾಹಕರ ಕಿರುಕುಳಕ್ಕೆ ಒಳಗಾಗುತ್ತಿದ್ದಳು. ಗ್ರಾಹಕರ ಬಳಿ ಆರೋಪಿ ಮಹಿಳೆಯು 6 ರಿಂದ 10 ಸಾವಿರ ರೂ. ವಸೂಲು ಮಾಡುತ್ತಿದ್ದಳು. ಇದರಿಂದ ಬಂದ ಹಣದಲ್ಲಿ ಅರ್ಧದಷ್ಟು ಹಣವನ್ನು ಸಂತ್ರಸ್ತೆಯ ತಾಯಿಗೆ ನೀಡಲಾಗುತ್ತಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!