
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ವರ್ಷದ ನಡೆದ ಕಾಲ್ತುಳಿತ ದುರಂತದಿಂದಾಗಿ ಐಪಿಎಲ್ ಆಯೋಜನೆಯ ಬಗ್ಗೆ ರಾಜ್ಯ ಸರಕಾರದ ನಿರ್ಧಾರವೇನು ಎಂಬುದರ ಬಗ್ಗೆ ಸೋಮವಾರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದು ಕೆಎಸ್‌ಸಿಎ ತಿಳಿಸಿದೆ.


ಮೈದಾನದ ಪರಿಶೀಲನೆಗಾಗಿ ರಾಜ್ಯ ಸರಕಾರ ನೇಮಿಸಿರುವ ಸಮಿತಿಯು ಶುಕ್ರವಾರ(ಮಾ.13) ಮೈದಾನಕ್ಕೆ ಭೇಟಿ ನೀಡಿದ್ದು, ಮೈದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಕೆಎಸ್‌ಸಿಎ ಸಂಪೂರ್ಣ ಮಾಹಿತಿ ನೀಡಿದೆ.

ಸಮಿತಿ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದ್ದು, ಸೋಮವಾರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದು ಹೇಳಿದೆ.