ಮಂಜೇಶ್ವರ: ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ “ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೇಶ್ವರ” ಇವರ 17 ವರುಷಗಳ ಸೇವೆಯ ತನ್ನ ವಿವಿಧ ಕಾರ್ಯ ಯೋಜನೆಗಳ ಅನುಷ್ಠಾನಕ್ಕೆ ಸಹಾಯರ್ಥವಾಗಿ ಮಂಗಳೂರಿನ ಪ್ರಖ್ಯಾತ ಸಂಗೀತಗಾರ, ಯುವ ಪ್ರತಿಭೆಯಾಗಿರುವ ಕೆವಿನ್ ಮಿಸ್ಕಿತ್ ಇವರ 54ನೇ ಕೊಂಕಣಿ ಸಂಗೀತ ಸಂಜೆಯನ್ನು ಅಯೋಜಿಸಿದೆ.




ಇದೇ ಜೂನ್ 21ನೇ ಭಾನುವಾರ ಸಂಜೆ 6.00 ಘಂಟೆಗೆ ಸರಿಯಾಗಿ ಮಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನೆರವೇರಿಸಲಾಗುವುದು. ಈ ಪ್ರಯುಕ್ತ ಪ್ರಚಾರ ಘೋಷಣೆಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಸ್ನೇಹಾಲಯ ಸಂಸ್ಥೆಯ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ನೆರವೇರಿಸಲಾಯಿತು.

ಸಂಸ್ಥೆಯ ಸ್ಥಾಪಕರೂ, ಅಧ್ಯಕ್ಷರು ಆಗಿರುವ ಜೋಸೆಫ್ ಕ್ರಾಸ್ತಾ ಪೊಸ್ಟರ್ ಬಿಡುಗಡೆ ಮಾಡಿ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಿದರು. ಸಭಾರಂಭದಲ್ಲಿ ಸ್ನೇಹಾಲಯದ ಹಲವು ಅಭಿಮಾನಿಗಳ ಉಪಸ್ಥಿಯಲ್ಲಿ ಶ್ರೀಯುತ ಶೆಲ್ಡಾನ್ ಕ್ರಾಸ್ತ, ಸಂಸ್ಥೆಯ ಕಾರ್ಯದರ್ಶಿಗಳಾದ ಒಲಿವಿಯಾ ಕ್ರಾಸ್ತಾ, ಸಂಗೀತಗಾರ ಕೆವಿನ್ ಮಿಸ್ಕಿತ್, ಸಲಹೆಗಾರರಾದ ಜಿಯೋ ಡಿ ಸಿಲ್ವ, ಅಗ್ರಾರ್, ಜಾಕ್ಸನ್ ಕಿನ್ನಿಗೋಳಿ ಹಾಗು ಇತರರು ಹಾಜರಿದ್ದರು.
