ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಯಕ್ಷಾಶ್ರಯ ಯೋಜನೆಯಡಿ ಕಲಾವಿದರಿಗೆ ಸಹಾಯಧನ ವಿತರಣೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಸದನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆಯಡಿ ಅರ್ಹ ಫಲಾನುಭವಿ ತೆಂಕು ಬಡಗಿನ ಕಲಾವಿದರುಗಳಿಗೆ ಸುಮಾರು ರೂಪಾಯಿ 25 ಲಕ್ಷ ಮೊತ್ತದ ಸಹಾಯ ಧನವನ್ನು ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಬಲ್ಲಾಳ್ ಬಾಗ್ ನಲ್ಲಿರುವ ಪತ್ತ್ ಮುಡಿ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು.


ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ ಕಲಾವಿದರು ಸ್ವಂತ ಮನೆಯನ್ನು ಕಟ್ಟಿ ಸುಖವಾಗಿರ ಬೇಕೆಂಬುದು ನಮ್ಮ ಆಶಯ. ದಾನಿಗಳಿಂದ ಪಡೆದು ಸಹಾಯಧನವನ್ನು ವಿತರಿಸಲಾಗಿದೆ. ಈ ಸಂದರ್ಭದಲ್ಲಿ ಮಹಾದಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.


ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಕೋಶಾಧಿಕಾರಿ CA ಸುದೇಶ್ ರೈ , ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಯಕ್ಷಾಶ್ರಯ ಯೋಜನೆಯ ಪದಾಧಿಕಾರಿ ಡಾ. ಪ್ರಖ್ಯಾತ್ ಶೆಟ್ಟಿ, ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯ ಸಂಚಾಲಕ ವಾಸು ಐತಾಳ ಹಾಗೂ ದೀವಿತ್ ಕೋಟ್ಯಾನ್ ಪೆರಾಡಿಯವರು ಉಪಸ್ಥಿತರಿದ್ದರು.

error: Content is protected !!