ಲೈಟ್ ಕಂಬಕ್ಕೆ ಖಾಸಗಿ ಬಸ್ ಢಿಕ್ಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!!

 

ಚಿಕ್ಕಮಗಳೂರು: ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸಂಗಮೇಶ್ವರಪೇಟೆ ಬಳಿ ಇಂದು(ಮಾ.16) ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಶೃಂಗೇರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್, ಎದುರಿಗೆ ಬಂದ ವಾಹನಕ್ಕೆ ದಾರಿ ಮಾಡಿಕೊಡಲು ಹೋದ ವೇಳೆ ಮಳೆಯಿಂದಾಗಿ ರಸ್ತೆ ಜಾರುತ್ತಿದ್ದುದರಿಂದ ನಿಯಂತ್ರಣ ತಪ್ಪಿದ ಬಸ್ ನೇರವಾಗಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಬಸ್ಸಿನ ಮೇಲೆಯೇ ಮುರಿದು ಬಿದ್ದಿದೆ. ಕಂಬ ಬಿದ್ದ ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!