
ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೋಳುಬೈಲು ಎಂಬಲ್ಲಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ(ಮಾ.15) ಸಂಜೆ ಸಂಭವಿಸಿದೆ.

ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಬೋಳುಬೈಲು ತಲುಪುತ್ತಿದ್ದಂತೆ ಎದುರಿನಿಂದ ಬಂದ ವಾಹನಕ್ಕೆ ಸೈಡ್ ನೀಡಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು ಸಹ ಪ್ರಯಾಣಿಕರಾದ ಹೇಮಾ ಹಾಗೂ ಶ್ರೀಚಂದ್ ಎಂಬುವವರಿಗೆ ಗಾಯಗಳಾಗಿವೆ. ಅವರ ಜತೆಗೆ ಇದ್ದ ಪುಟ್ಟ ಮಗು ಹಾಗೂ ಚಾಲಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.