ಕಟಪಾಡಿ ಬಳಿ ಗ್ಯಾಸ್  ಟ್ಯಾಂಕರ್ ಮಗುಚಿ ಹೆದ್ದಾರಿಯಲ್ಲಿ ವಾಹನ ದಟ್ಟಣೆ: ಅನಿಲ ಸೋರಿಕೆ ಭೀತಿ

ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಹೆದ್ದಾರಿಗೆ ಅಡ್ಡಲಾಗಿ ಮಗುಚಿ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಇಂದು(ಮಾ.16) ಸಂಭವಿಸಿದ್ದು, ಹೆದ್ದಾರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ.


ಅನಿಲ ಸೋರಿಕೆಯ ಭೀತಿಯಿಂದ ಕಟಪಾಡಿ ಜಂಕ್ಷನ್ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಾಪು ಠಾಣೆ ಪಿಎಸ್ ಐ, ಆರಕ್ಷಕ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

error: Content is protected !!