ವಸತಿ ಗೃಹದ ಕೊಠಡಿಯಲ್ಲಿ ನೇಣು ಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಉಡುಪಿ: ನಗರದ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿಯ ವಸತಿ ಗೃಹದಲ್ಲಿ ಕೊಠಡಿ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ(ಮಾ.15) ನಡೆದಿದೆ.

ಪೂತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್ ಪಿ.ಎಂ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ವೈಯಕ್ತಿಕ ಕಾರಣದಿಂದ ಮನನೊಂದು ಅವರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲಾಯಿತು ಎಂದು ತಿಳಿದು ಬಂದಿದೆ.

error: Content is protected !!