ಉಡುಪಿ: ಕಟಪಾಡಿ ಬಳಿ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಗೆ ಸೇರಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ವಾಹನಗಳು ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು ಆದೇಶಿಸಿದ್ದಾರೆ.
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಮಗುಚಿ ಹೆದ್ದಾರಿಯಲ್ಲಿ ವಾಹನ ದಟ್ಟಣೆ: ಅನಿಲ ಸೋರಿಕೆ ಭೀತಿ
ಪರ್ಯಾಯ ಸಂಚಾರ ಮಾರ್ಗಗಳು:
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವ – ಮೂಡುಬೆಳ್ಳೆ – ಮಣಿಪುರ – ಮಣಿಪಾಲ ಮಾರ್ಗವಾಗಿ ಉಡುಪಿ ತಲುಪಬಹುದು. ಅಥವಾ ಪಡುಬಿದ್ರೆ – ಬೆಳ್ಮಣ್ಣು – ಶಿರ್ವ – ಮಣಿಪಾಲ ಮಾರ್ಗವಾಗಿ ಉಡುಪಿ ಸೇರಬಹುದು.

ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ – ಮೂಡುಬೆಳ್ಳೆ – ಶಿರ್ವ – ಕಾಪು ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸಬಹುದು. ಅಥವಾ ಮಣಿಪಾಲ – ಶಿರ್ವ – ಬೆಳ್ಮಣ್ಣು – ಪಡುಬಿದ್ರೆ ಮಾರ್ಗವಾಗಿ ಮಂಗಳೂರು ತಲುಪಬಹುದು.

ಅಪಘಾತದ ಸ್ಥಳದಲ್ಲಿ ಅನಿಲ ಸೋರಿಕೆ ತಡೆಗಟ್ಟುವ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಆಡಳಿತ ಮಂಡಳಿ ವಿನಂತಿಸಿದೆ.
