
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಡೆಯಲಿರುವ 60ನೇ ಬೆಂಗ್ರೆ ವಾರ್ಡಿನ ನಾಲ್ಕು ಕೈ ಪಂಜುರ್ಲಿ ದೈವಸ್ಥಾನ, ಬೆಂಗ್ರೆ ತೋಟ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.

ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯದ ಬೇಡಿಕೆಗೆ ಅನುಗುಣವಾಗಿ ಅನುದಾನಗಳನ್ನು ಹೊಂದಿಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಪೂರ್ಣವಾಗಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ, ಸ್ಥಳೀಯ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.
