ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಬಿಜೆಪಿ ಮಂಗಳೂರು ದಕ್ಷಿಣ, ಉತ್ತರ ಮಂಡಲದ ನೇತೃತ್ವದಲ್ಲಿ ಪ್ರತಿಭಟನೆ

ಮಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಯವರ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ದುರಾಡಳಿತ, ಭ್ರಷ್ಟಾಚಾರ, ಜನ ನೀತಿ ವಿರೋಧಿ ಹಾಗೂ ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಹಾಗೂ ಉತ್ತರದ ನೇತೃತ್ವದಲ್ಲಿ ನಾಳೆ (ಮಾ.18) ಲಾಲ್ ಭಾಗ್ ನಲ್ಲಿರುವ ಪಾಲಿಕೆ ಕಚೇರಿ ಮುಂಭಾಗದಲ್ಲಿ ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಾಲಿಕೆಯಲ್ಲಿ ಬಿಜೆಪಿ ಆಡಳಿತದ ಅವಧಿ ಅಂತ್ಯಗೊಂಡು ವರ್ಷಗಳು ಕಳೆದಿದ್ದು, ಇದೀಗ ಯಾವುದೇ ಜನಪ್ರತಿನಿಧಿಗಳಿಲ್ಲದೇ ಇರುವ ಪಾಲಿಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಾಧಿಕಾರಿ ಮೂಲಕ ಆಡಳಿತ ನಡೆಸುತ್ತಿದ್ದು ಜನರ ಸಮಸ್ಯೆಗೆ ಕಿವಿಗೊಡುವವರೇ ಇಲ್ಲವಾಗಿದೆ. ಇಂದಿಗೂ ಜನಸಾಮಾನ್ಯರು ನಿಕಟಪೂರ್ವ ಪಾಲಿಕೆ ಸದಸ್ಯರಿಗೇ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳುತ್ತಿದ್ದು, ಪಾಲಿಕೆ ಅಧಿಕಾರಿಗಳು ಅವರಿಗೂ ಸೂಕ್ತ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಜನಸಾಮಾನ್ಯರ ಪರವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇ-ಖಾತಾ ಸಿಗದೇ ಪರಿತಪಿಸುತ್ತಿರುವವರು, ತಿಂಗಳಾನುಗಟ್ಟಲೆ ಜನನ-ಮರಣ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗದೇ ರೋಸಿ ಹೋಗಿರುವವರು, ಕುಡಿಯಲು ನೀರು ಸಿಗದೇ ಸಮಸ್ಯೆ ಅನುಭವಿಸುತ್ತಿರುವ ಕುಟುಂಬಗಳು, ತೀವ್ರ ಕಸದ ಸಮಸ್ಯೆ ಇರುವ ವಾರ್ಡಿನ ಸಾರ್ವಜನಿಕರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: Content is protected !!