ವಿದ್ಯುತ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಸಾ*ವು

ಬೆಳ್ತಂಗಡಿ: ವಿದ್ಯುತ್ ಕಂಬ ಅಳವಡಿಸುವ ಕಾಮಗಾರಿ ವೇಳೆ ಕಂಬ ಮೈಮೇಲೆ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸೋಮವಾರ(ಮಾ.16) ಸಂಜೆ ವೇಳೆ ನಡೆದಿದೆ.

ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಶಿವಪ್ಪ (40) ಮೃತ ವ್ಯಕ್ತಿ.

ಶಿವಪ್ಪ ಅವರು ಕಳೆದ ಹಲವು ವರ್ಷಗಳಿಂದ ಗುತ್ತಿಗೆದಾರ ಪುರುಷೋತ್ತಮ ಎಂಬವರ ಬಳಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ಕೊಕ್ಕಡದ ಶ್ರೀ ರಾಮ ಭಜನಾ ಮಂದಿರದ ಬಳಿ ವಿದ್ಯುತ್ ಕಂಬ ಅಳವಡಿಸುವ ಕಾರ್ಯದಲ್ಲಿ ಅವರು ನಿರತರಾಗಿದ್ದರು. ಶಿವಪ್ಪ ಅವರು ಯಾವುದೇ ಸುರಕ್ಷತಾ ಸಾಧನಗಳನ್ನು ಧರಿಸದೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಕಂಬವು ಅವರ ಮೈಮೇಲೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಪರಿಣಾಮ ಅವರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!