ಭೂ ವ್ಯವಹಾರದ ವೈಷಮ್ಯ: ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಯತ್ನ

ಮಂಗಳೂರು: ಭೂ ವ್ಯವಹಾರದ ವ್ಯಾಜ್ಯದ ಕೋಪದಿಂದ ಕಾರಿನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಮಂಗಳವಾರ(ಮಾ.17) ನಡೆದಿದೆ.

ಮಲ್ಲಿಕಟ್ಟೆ ನಿವಾಸಿ ಮೋಹನ್ ದಾಸ್ ಶೆಟ್ಟಿ(56) ಗಾಯಗೊಂಡವರು. ಮಹಮ್ಮದ್ ಶರೀಫ್ ಆರೋಪಿ.

ಮೋಹನ್‌ ದಾಸ್‌ ಶೆಟ್ಟಿ ಅವರಿಗೆ ಆರೋಪಿ ಮಹಮ್ಮದ್ ಶರೀಫ್ ಮತ್ತು ಆತನ ತಂದೆ ಮಹಮ್ಮದ್ ಇಕ್ಬಾಲ್ ರವರ ಮಧ್ಯೆದಲ್ಲಿ ಭೂ ವ್ಯವಹಾರವಿತ್ತು. ಸುರತ್ಕಲ್‌ನ ಕಾನ ಮತ್ತು ವಾಮಂಜೂರಿನಲ್ಲಿ ಆರೋಪಿಯು ಸುಮಾರು ಎರಡು ಕೋಟಿ ರೂ ಹಣ ಹೂಡಿಕೆ ಮಾಡಿದ್ದರು. ಆದರೆ ಮೋಹನ್ ದಾಸ್ ಶೆಟ್ಟಿ ಆರೋಪಿಗೆ ಮೋಸ ಮಾಡಿದ ಸಿಟ್ಟಿನಿಂದ ಮಂಗಳವಾರ ಬೆಳಗ್ಗೆ 11 ಗಂಟೆಗೆ ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿ ಮೋಹನ್‌ ದಾಸ್ ಮೊಬೈಲನ್ನು ಕಸಿದುಕೊಂಡಿದ್ದ.

ನಂತರ ಮೋಹನ್‌ ದಾಸ್‌ ಶೆಟ್ಟಿ ಅವರು ತನ್ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿರುವಾಗ ಆರೋಪಿ ಶರೀಫ್ ಸಿಟ್ಟಿನಿಂದ ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿ ವೇಗವಾಗ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಗುದ್ದಿ ಕೊಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಆರೋಪಿ ಮಹಮ್ಮದ್ ಶರೀಫ್ ಎಂಬಾತನನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!