ಹೊಂಬಾಳೆ ಅನ್​​ಫಾಲೋ ಮಾಡಿದ ರಿಷಬ್‌ ಶೆಟ್ಟಿ; ತಮ್ಮದೇ ಬ್ಯಾನರ್​ನಲ್ಲಿ ‘ಚಾಪ್ಟರ್ 2’ ಘೋಷಣೆ

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ದೊಡ್ಡ ಮಟ್ಟದ ಯಶಸ್ಸು ಕಂಡಿರುವಂತಹ ರಿಷಬ್ ಶೆಟ್ಟಿ ಅವರು, ನಿರ್ದೇಶನ ಮಾಡುವುದರ ಮೂಲಕ ಹೆಚ್ಚಿನ ಜನಪ್ರಿಯತೆ ಪಡೆದಿದ್ದಾರೆ. ಇದೀಗ ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಸಿಹಿಸುದ್ದಿ ಎನ್ನುವಂತೆ ‘ಚಾಪ್ಟರ್ 2’ ಸಿನಿಮಾವನ್ನು ತಮ್ಮದೇ ಬ್ಯಾನರ್‌ನಲ್ಲಿ ಘೋಷಣೆ ಮಾಡಿದ್ದಾರೆ. ಆದರೆ ಇದು ನಿಜಕ್ಕೂ ‘ಕಾಂತಾರ ಚಾಪ್ಟರ್ 2’ನಾ? ಅಥವಾ ಬೇರೆ ಚಿತ್ರವೇ ಎಂಬ ಪ್ರಶ್ನೆ ಜನರಲ್ಲಿ ಮೂಡುತ್ತಿದೆ. ಹೀಗಿರುವಾಗಲೇ ರಿಷಬ್ ಅವರು ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹೊಂಬಾಳೆ ಫಿಲ್ಮ್ಸ್​​ ಅನ್ನು ರಿಷಬ್ ಅನ್​​ಫಾಲೋ ಮಾಡಿದ್ದಾರೆ.

ರಿಷಬ್ ಅವರು ಯುಗಾದಿಗೆ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಾರೆ. ಆದರೆ, ರಿಷಬ್ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ. ‘ಕಾಂತಾರ’ ಸರಣಿಯನ್ನು ನಿರ್ಮಾಣ ಮಾಡಿರೋದು ಹೊಂಬಾಳೆ ಫಿಲ್ಮ್ಸ್. ‘ಚಾಪ್ಟರ್ 2’ ಅನೌನ್ಸ್ ಮಾಡಿರೋದು ಅವರದ್ದೇ ಬ್ಯಾನರ್ ಅಡಿಯಲ್ಲಿ.

ರಿಷಬ್ ಪೋಸ್ಟರ್‌ನಲ್ಲಿ​ ಎಲ್ಲಿಯೂ ‘ಕಾಂತಾರ: ಚಾಪ್ಟರ್ 2’ ಎಂದು ಅನೌನ್ಸ್ ಮಾಡಿಲ್ಲ. ಹೀಗಾಗಿ ವಿವಿಧ ಚರ್ಚೆ ನಡೆದಿದೆ. ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರಕ್ಕೆ ಎರಡನೇ ಚಾಪ್ಟರ್ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಇನ್ನೂ ಕೆಲವರು ‘ಕಾಂತಾರ: ಚಾಪ್ಟರ್ 2’ ಎನ್ನುತ್ತಿದ್ದಾರೆ. ಇವುಗಳ ಮಧ್ಯೆ ರಿಷಬ್ ಅವರು ಇನ್​​ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಯನ್ನು ಅನ್​​​ಫಾಲೋ ಮಾಡಿದ್ದಾರೆ. ಇದು ಜನರ ಮಧ್ಯೆ ಚರ್ಚೆಯನ್ನು ಹುಟ್ಟು ಹಾಕಿದೆ.

error: Content is protected !!