ಪುತ್ತೂರು: ದಾಂಪತ್ಯ ಕಲಹದ ಹಿನ್ನೆಲೆ ಹೆಂಡತಿ ಹತ್ಯೆಗೀಡಾಗಿ, ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಇಂದು(ಮಾ.20) ಬೆಳಿಗ್ಗೆ ಸಂಭವಿಸಿದೆ.

ಗಂಡ–ಹೆಂಡತಿಯ ನಡುವಿನ ವಾಗ್ವಾದವು ಹಿಂಸಾತ್ಮಕ ತಿರುವು ಪಡೆದು, ಪತ್ನಿಯನ್ನು ಪತಿ ಹತ್ಯೆ ಮಾಡಿದುದಾಗಿ ಪ್ರಾಥಮಿಕವಾಗಿ ತಿಳಿದುಬಂದಿದ್ದು, ಘಟನೆಯ ನಂತರ ಪತಿಯೂ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಅವನನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಸುದ್ದಿ ತಿಳಿದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.