ಲಿಫ್ಟ್​ನಲ್ಲಿ ಸಿಲುಕಿ ವ್ಯಕ್ತಿ ಸಾ*ವು, ಮಗ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಆರ್​ಜಿಕರ್ ಆಸ್ಪತ್ರೆಯ ಲಿಫ್ಟ್​​ನಲ್ಲಿ ವ್ಯಕ್ತಿಯೊಬ್ಬರು ಸಿಲುಕಿ ಮೃತಪಟ್ಟಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಂದರ್ಭಿಕ ಚಿತ್ರ

ಅರೂಪ್ ಬಂಡೋಪಾಧ್ಯಾಯ ಮೃತ ವ್ಯಕ್ತಿ . ಮೃತರ ಮಗನ ಕಾಲಿನ ಮೂಳೆ ಮುರಿದಿದ್ದು, ಆರ್​​ಜಿ ಕರ್ ಕಾಲೇಜು, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಅರೂಪ್ ಬಂಡೋಪಾಧ್ಯಾಯ ಶಸ್ತ್ರಚಿಕಿತ್ಸಾ ಕೊಠಡಿಯಿಂದ ಹಿಂದಿರುಗುತ್ತಿದ್ದಾಗ ಲಿಫ್ಟ್​ನಿಂದ ಕೆಳಗೆ ಹೋಗುತ್ತಿದ್ದರು. ಲಿಫ್ಟ್​ ಇದ್ದಕ್ಕಿದ್ದಂತೆ ನಿಂತಿತ್ತು, ಒಳಗೆ ಮೂವರು ಸಿಲುಕಿಕೊಂಡಿದ್ದರು. ಅರೂಪ್ ಬಹಳ ಸಮಯವಾದರೂ ಹಿಂದಿರುಗದಿದ್ದಾಗ ಕುಟುಂಬ ಚಿಂತಿತರಾಗಿ ಅವರನ್ನು ಹುಡುಕಲು ಆರಂಭಿಸಿತ್ತು. ನಂತರ ಅವರ ಶವ ಲಿಫ್ಟ್​ ಒಳಗೆ ಪತ್ತೆಯಾಗಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ತುರ್ತು ಪರಿಸ್ಥಿತಿಯಲ್ಲಿ ಸಹಾಯ ಮಾಡಲು ಲಿಫ್ಟ್​ಮ್ಯಾನ್ ಇರಲಿಲ್ಲ. ಪ್ರಾಥಮಿಕ ತನಿಖೆಗಳು ಇದನ್ನು ಸಂಪೂರ್ಣ ನಿರ್ಲಕ್ಷ್ಯವೆಂದು ಪರಿಗಣಿಸುತ್ತಿವೆ. ಹಿಂದಿನ ದಿನ ಲಿಫ್ಟ್​ ಕೆಟ್ಟುಹೋಗಿತ್ತು. ಆದರೆ ಅದನ್ನು ದುರಸ್ತಿ ಮಾಡಲಾಗಿಲ್ಲ ಎಂದು ಕೆಲವರು ಹೇಳಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಆರಂಭವಾದಾಗ ಸಿಬ್ಬಂದಿಗೆ ಲಿಫ್ಟ್​ ಕೀ ಸಿಗಲಿಲ್ಲ, ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!