ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ; 8 ಮಂದಿಗೆ ಗಾಯ

ಚಿಕ್ಕಮಗಳೂರು: ಕುಕ್ಕನೂರಿನಿಂದ–ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ(KKRTC) ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮಾಡಲಾಗುತ್ತಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!