ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ಪಲ್ಟಿ: 9 ಮಂದಿಗೆ ಗಾಯ

ಕೊಟ್ಟಿಗೆಹಾರ: ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿಯಾಗಿ 9 ಮಂದಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ(ಮಾ.21) ನಡೆದಿದೆ.

ಘಟನೆ ಬಳಿಕ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!