
ಉಡುಪಿ: ಟೆಂಪೋ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆತ್ರಾಡಿ ಕಬ್ಯಾಡಿಯ ಅರ್ಮನ್ ಫ್ಯಾಕ್ಟರಿ ಬಳಿ ಇಂದು(ಮಾ.23) ನಡೆದಿದೆ.

ಹೆರ್ಗಾ ಗ್ರಾಮದ ಭಾಸ್ಕರ್ ನಾಯಕ್ (70) ಮೃತ ಬೈಕ್ ಸವಾರ.

ಟೆಂಪೋ ಆತ್ರಾಡಿಯಿಂದ ಮೂಡುಬೆಳ್ಳೆ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
