ಸುಳ್ಯ: ಅಲೆಕ್ಕಾಡಿ ಹಾಲು ಸೊಸೈಟಿಯ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳಕ್ಕೆ ಭೇಟಿಕೊಟ್ಟ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಮಧ್ಯಾಹ್ನದ ವೇಳೆಗೆ ಬೆಂಕಿ ಹತ್ತಿಕೊಂಡಿದ್ದು, ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸುಳ್ಯ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕಿರಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಸ್ಥಳೀಯರು ಕೈಜೋಡಿಸಿದ್ದರು.

