ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಹುಬ್ಬಳ್ಳಿ: ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಸೋಮವಾರ(ಮಾ.23) ರಾತ್ರಿ ವೇಳೆ ನಡೆದಿದೆ.

ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಮೃತ ಯುವಕರು.

ರಸ್ತೆ ಮೇಲೆ ಕೇಬಲ್ ವೈರ್ ಹರಿದು ಬಿದ್ದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು ಆ ವೈರ್‌ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

error: Content is protected !!