
ಮಂಗಳೂರು: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ವೀರಕಂಬ ಮೂಲದವರು ಎನ್ನಲಾದ ಸವಾರ ಮತ್ತು ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.


ಕಾರಿನ ಚಾಲಕ ವಿಟ್ಲದ ಮೇಗಿನಪೇಟೆಯ ನಿವಾಸಿಯದ್ದು ಎಂದು ಹೇಳಲಾಗಿದ್ದು, ಹೊರ ರಾಜ್ಯದವರು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ.